ನವದೆಹಲಿ : ಕಾಂಗ್ರೆಸ್ ಪಕ್ಷ ಯಾವತ್ತೂ ಮಹಿಳೆಯರ ಜೊತೆಗಿದೆ. ಮಹಿಳೆಯರ ಪರವಾಗಿ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ನಾಲ್ಕನೆಯ ಹಂತದ ಮತದಾನದ ದಿನವಾದ ಇಂದು ವೀಡಿಯೋ ಸಂದೇಶವೊಂದನ್ನು ನೀಡಿರುವ ಅವರು ಕಾಂಗ್ರೆಸ್ ಪಕ್ಷದ ಮಹಾಲಕ್ಶ್ಮಿ ಯೋಜನೆಯ ಪ್ರಸ್ತಾಪ ಮಾಡಿದ್ದಾರೆ. ಇದು ಕ್ರಾಂತಿಕಾರಿ ಯೋಜನೆ ಎಂದು ಅವರು ಹೇಳಿದ್ದಾರೆ.
ನವ ಭಾರತದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ದದು. ಇವತ್ತಿನ ಸಂಕಷ್ಟದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯ ಪರವಾಗಿ ನಿಲ್ಲುತ್ತದೆ ಎಂಬ ಭರವಸೆಯನ್ನು ಅವರು ನೀಡಿದ್ದಾರೆ.







