ನವದೆಹಲಿ : ಸೋಮವಾರ ನಡೆದ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ 62. 84 ರಷ್ಟು ಮತದಾನವಾಗಿದೆ. 2019ರ ಚುನಾವಣೆಗೆ ಹೋಲಿಸಿದರೆ ಶೇ. 2.5 ರಷ್ಟು ಕಡಿಮೆಯಾಗಿದೆ. ಆಗ ಶೇ. 65. 51 ರಷ್ಟು ಮತದಾನವಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ನಾಲ್ಕನೇ ಹಂತದಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯಿತು. ಇದರೊಂದಿಗೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 379 ಸ್ಥಾನಗಳಲ್ಲಿ ಮತದಾನ ಪೂರ್ಣಗೊಂಡಿದೆ. ಆಂಧ್ರ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನ ಮುಕ್ತಾಯವಾಗಿದೆ.

ನಾಲ್ಕನೇ ಹಂತದಲ್ಲಿ 10 ರಾಜ್ಯಗಳ 96 ಸ್ಥಾನಗಳಿಗೆ ಮತದಾನ ನಡೆಯಿತು.. ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಶೇ. 66. 14 ರಷ್ಟು ಮತದಾನವಾಗಿತ್ತು. ಏಪ್ರಿಲ್ 26 ರಂದು ನಡೆದ ಎರಡನೇ ಹಂತದಲ್ಲಿ ಶೇ. 66. 71, ಮೂರನೇ ಹಂತದಲ್ಲಿ ಶೇ. 65. 68 ರಷ್ಟು ಮತದಾನವಾಗಿತ್ತು.

ನಾಲ್ಕನೆಯ ಹಂತದ ಚುನಾವಣೆಯಲ್ಲೂ ಜನ ಹೆಚ್ಚಿನ ಆಸಕ್ತಿಯನ್ನು ತೋರಿಸಿಲ್ಲ. ಇದು ರಾಜಕೀಯ ಪಕ್ಷಗಳ ಆತಂಕಕ್ಕೆ ಕಾರಣವಾಗಿದೆ. ಕಡಿಮೆ ಮತದಾನ ಯಾವ ರಾಜಕೀಯ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಚರ್ಚೆ ಪ್ತಾರಂಭವಾಗಿದೆ. ಜನರ ನಿರಾಸಕ್ತಿಗೆ ಕಾರಣವೇನು ಎಂಬ ಬಗ್ಗೆಯೂ ಬೇರೆ ಬೇರೆ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ..

Author

Leave a Reply

Your email address will not be published. Required fields are marked *