Graduate Constituency Election : ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್  ನಾಮಪತ್ರ ಸಲ್ಲಿಕೆ

Ayanur Manjunath : ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮೈಸೂರು : ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ  ಎಸ್ ಮಧು ಬಂಗಾರಪ್ಪ, ಶಾಸಕ ತನ್ವೀರ್ ಸೇಠ್, ಹೊನ್ನಾಳಿ ಶಾಸಕ ಶಾಂತನಗೌಡ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ್ ಸರ್ಜಿ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ 21 ಮಂದಿ ನಾಮಪತ್ರ ವಿಧಾನ ಪರಿಷತ್‌ನ ಪದವೀಧರರ ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬುಧವಾರ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅತ್ಯಧಿಕ 14 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 11, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು, ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ತಲಾ ಆರು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ನಾಲ್ವರು ನಾಮಪತ್ರವನ್ನ ನಿನ್ನೆಯವರೆಗೆ ಸಲ್ಲಿಸಿದ್ದಾರೆ.

Author

error: