H D Kumaraswamy : ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswamy : ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ( ಟ್ವೀಟರ್ ) ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

Author

Leave a Reply

Your email address will not be published. Required fields are marked *