BBMP Task Force : ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು “ಟಾಸ್ಕ್ ಫೋರ್ಸ್” ಸಮಿತಿ ರಚನೆ

BBMP Task Force : ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ವಲಯ ಮಟ್ಟದಲ್ಲಿ 'ಟಾಸ್ಕ್ ಫೋರ್ಸ್" ಸಮಿತಿ ರಚಿಸಿ ಆದೇಶಿಸಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ವಲಯ ಮಟ್ಟದಲ್ಲಿ ‘ಟಾಸ್ಕ್ ಫೋರ್ಸ್” ಸಮಿತಿ ರಚಿಸಿ ಆದೇಶಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 12878 ಕಿ.ಮೀ ರಸ್ತೆ ಜಾಲವಿದ್ದು, ಈ ರಸ್ತೆಗಳ ಪೈಕಿ 1344.84 ಕಿ.ಮೀ ಉದ್ದದ ರಸ್ತೆಗಳನ್ನು ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳೆಂದು ಪರಿಗಣಿಸಲಾಗಿದ್ದು, ರಸ್ತೆಗಳನ್ನು ರಸ್ತೆ ಮೂಲಭೂತ ಸೌಕರ್ಯ ಶಾಖೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಉಳಿಕೆ 11533.16 ಕಿ.ಮೀ ರಸ್ತೆಗಳನ್ನು ವಲಯ ಮಟ್ಟದಲ್ಲಿ ನಿರ್ವಹಣೆ ಮಾಡಲಾಗುತ್ತಿರುತ್ತದೆ.

ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮತ್ತು ನಿಗಧಿತ ಅವಧಿಯಲ್ಲಿ ನಿರ್ವಹಣೆ ಮಾಡಲು ವಲಯ ಮಟ್ಟದಲ್ಲಿ “ವಲಯವಾರು ಟಾಸ್ಕ್ ಫೋರ್ಸ್” ರಚನೆ ಮಾಡುವುದು ಸೂಕ್ತವೆಂದು ತೀರ್ಮಾನಿಸಿ, ಸದರಿ ಟಾಸ್ಕ್ ಫೋರ್ಸ್‌ ಅನ್ನು ವಲಯ ಮಟ್ಟದ ವಲಯ ಆಯುಕ್ತರು ರವರ ನೇತೃತ್ವದಲ್ಲಿ ರಚಿಸಲಾಗಿದೆ.

Author

error: