Exit Poll 2024 : ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

Lokasabha Election Exit polls 2024 : ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪ ಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ.

ಬೆಂಗಳೂರು :”ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದರು.

“ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪ ಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ” ಎಂದರು.

Author

error: