Rahul Gandhi: ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿದ ರಾಹುಲ್ ಗಾಂಧಿ

Rahul Gandhi : ರಾಯ್ ಬರೇಲಿಯಲ್ಲಿ ರಾಗಾ 6.61 ಲಕ್ಷ ಮತಗಳನ್ನು ಪಡೆಯುವ ಮೂಲಕ 2.8 ಲಕ್ಷ ಮತ ಪಡೆದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಬಿಎಸ್ಪಿಯ ಠಾಕೂರ್ ಪ್ರಸಾದ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ ಹಾಗೂ ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎರಡೂ ಕ್ಷೇತ್ರಗಳಲ್ಲಿ ಸುಮಾರು 4 ಲಕ್ಷ ಮತಗಳ ಅಂತರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

ರಾಯ್ ಬರೇಲಿಯಲ್ಲಿ ರಾಗಾ 6.61 ಲಕ್ಷ ಮತಗಳನ್ನು ಪಡೆಯುವ ಮೂಲಕ 2.8 ಲಕ್ಷ ಮತ ಪಡೆದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಬಿಎಸ್ಪಿಯ ಠಾಕೂರ್ ಪ್ರಸಾದ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ.

ವಯನಾಡಿನಲ್ಲಿ ರಾಹುಲ್ 6.30 ಲಕ್ಷ ಮತಗಳನ್ನು ಪಡೆದಿದ್ದು ಮುನ್ನಡೆಯಲ್ಲಿದ್ದಾರೆ. ಇವರ ವಿರುದ್ಧ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿ ಅನ್ನಿ ರಾಜಾ 2.75 ಲಕ್ಷ ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಕೆ ಸುರೇಂದ್ರನ್ ಮೂರನೇ ಸ್ಥಾನದಲ್ಲಿದ್ದಾರೆ.

Author

error: