ಬೆಳಗಾವಿ : ಲೋಕಸಭಾ ಚುನಾವಣೆಯಲ್ಲಿ ಡೈರೆಕ್ಟರ್, ಪ್ರೊಡ್ಯೂಸರ್ ಫೇಲ್ ಆದರೆ ಇಂತಹ ಫಲಿತಾಂಶ ಬರುತ್ತದೆ ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಗೋಕಾಕ್ನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಇನ್ನೂ ಒಂದಷ್ಟು ಸೀಟುಗಳು ಬರುವ ಸಾಧ್ಯತೆ ಇತ್ತು. ಆದರೆ ನಮ್ಮ ನಾಯಕರ ಅತಿಯಾದ ಆತ್ಮವಿಶ್ವಾಸದಿಂದ ಕೆಲ ಕ್ಷೇತ್ರಗಳನ್ನು ಕಳೆದು ಕೊಳ್ಳಬೇಕಾಯಿತು ಎಂದರು.
ಪ್ರಚಾರಕ್ಕೆ ಕಡಿಮೆ ಸಮಯ ಇರುತ್ತದೆ. ಹೀಗಾಗಿ ಆ ಸಮಯದಲ್ಲಿ ಎಲ್ಲರೂ ಅಲರ್ಟ್ ಇದ್ದು ಕೆಲಸ ಮಾಡಬೇಕಾಗುತ್ತದೆ. ನಮ್ಮ ನಾಯಕರು ಹಲವು ಕ್ಷೇತ್ರಗಳಲ್ಲಿ ಸರಿಯಾಗಿ ಪ್ರಚಾರ ಮಾಡದೇ ನಿರ್ಲಕ್ಷಿಸಿದ್ದು ಕೂಡಾ ನಮ್ಮ ಹಿನ್ನಡೆಗೆ ಕಾರಣ ಎಂದು ಹೇಳಿದ್ದಾರೆ.
ಕೆಲವು ಕ್ಷೇತ್ರಗಳಲ್ಲಿ ಗೆಲ್ಲುವ ಅತಿಯಾದ ಆತ್ಮವಿಶ್ವಾಸ ನಮ್ಮ ನಾಯಕರಿಗಿತ್ತು. ಹೀಗಾಗಿ ಅಂತಹ ಸ್ಥಳಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಚಾರ ಮಾಡಲಿಲ್ಲ. ಹೀಗಾಗಿ ಅಂತಹ ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದರು.
