ಬೆಂಗಳೂರು: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿ. ಶಿವಲಿಂಗೇಗೌಡರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೊಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

ಜಿ. ಶಿವಲಿಂಗೇಗೌಡರಿಗೆ ವ್ಯವಸಾಯದಲ್ಲಿನ ಅಪಾರ ಅನುಭವ ಹಾಗೂ ಅರವತ್ತು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಕಷ್ಟ ನಷ್ಟದ ನಡುವೆ ಉಪ ಕಸುಬುಗಳನ್ನು ಮಾಡಿಕೊಂಡು ಪ್ರಗತಿಪರ ರೈತರಾಗಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಬಿ.ಜಿ ಜಗದೀಶ್ ತಿಳಿಸಿದ್ದಾರೆ.

ಇದೇ ಜುಲೈ 13 ರಂದು ಬೀದರ್ ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ.ಜಿ. ರಾವ್ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *