ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್1 ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದಂತೆ ವೇತನ ಜಾರಿಗೊಳಿಸುವ ಬೇಡಿಕೆಯ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಅಂತಿಮವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವಂತ ನಿರ್ಣಯಕ್ಕೆ ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ.
ವೇತನ ಆಯೋಗದ ಜಾರಿಗೆ ಒತ್ತಾಯಿಸಿ ಆಗಸ್ಟ್ ತಿಂಗಳಿನಲ್ಲಿ ಆನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸರ್ಕಾರಿ ನೌಕರರು ನಿರ್ಧರಿಸಿದ್ದರು.







