ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅವರು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಬುಧವಾರ ರಾತ್ರಿ ಕಾವೇರಿ ನಿವಾಸಕ್ಕೆ ಆಗಮಿಸಿ ಬಿ ಕೆ ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಿಬ್ಬಂದಿಗಳನ್ನು ಹೊರಗೆ ಕಳುಹಿಸಿ ಬಿ ಕೆ ಹರಿಪ್ರಸಾದ್ ಅವರ ಜೊತೆ ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯು ಅವರು ಸುಮಾರು ಒಂದೂವರೆ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಮುಡಾ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಒಂದೂವರೆ ವರ್ಷದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಬಿ ಕೆ ಹರಿಪ್ರಸಾದ್ ಅವರು ಭೇಟಿ ಮಾಡಿರಲಿಲ್ಲ. ಸಚಿವ ಸ್ಥಾನ ತಪ್ಪಿದ್ದರಿಂದ ಅಸಮಧಾನಗೊಂಡಿದ್ದ ಹರಿಪ್ರಸಾದ್ ಅವರ ಸಿಎಂ ಭೇಟಿ ರಾಜ್ಯ ರಾಜ್ಯ ಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯಾಗಿದೆ.

ಮೈಸೂರಿನಲ್ಲಿ ನಡೆಯುವ ಸಮಾವೇಶಕ್ಕೆ ಬಂದು ಬೆಂಬಲ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹರಿಪ್ರಸಾದ್ ಅವರಿಗೆ ಹೇಳಿದ್ದಾರೆ. ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಬಿ ಕೆ ಹರಿಪ್ರಸಾದ್ ಅವರನ್ನು ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆಗಸ್ಟ್ ಕೊನೆಯ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಬಿ ಕೆ ಹರಿಪ್ರಸಾದ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

Author

Leave a Reply

Your email address will not be published. Required fields are marked *