ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹೈಕೋರ್ಟ್​​ ತೀರ್ಪು, ಅನಿರೀಕ್ಷಿತ ಮಾತ್ರವಲ್ಲ ದುರದೃಷ್ಟಕರ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಿ, ಮುಖ್ಯಮಂತ್ರಿಯ ವಿರುದ್ದ ಬಿಜೆಪಿಯ ಷಡ್ಯಂತ್ರದ ಭಾಗವಾಗಿಯೇ ಪ್ರಕ್ರಿಯೆ ನಡೆಯುತ್ತಿರುವುದು ಸ್ಫಷ್ಟ. ಅಲ್ಲದೇ ಸೇಡಿನ ರಾಜಕಾರಣಕ್ಕೆ ನ್ಯಾಯಾಂಗದ ಮೂಲಕವೇ ಉತ್ತರ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: CM ಸಿದ್ದರಾಮಯ್ಯ ಎಚ್ಚರಿಕೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

Author

Leave a Reply

Your email address will not be published. Required fields are marked *