ಕಾರವಾರ: ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ ಅವರು ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅಸ್ನೋಟಿಕರ್ ಅವರು ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.
ಪತಿ ಶಾಸಕರಾಗಿದ್ದ ವಸಂತ್ ಅಸ್ನೋಟಿಕರ್ ಹತ್ಯೆಯ ನಂತರ ಶುಭಲತಾ ಅವರು ಇಡೀ ಕುಟುಂಬದ ಜವಬ್ದಾರಿ ಹೊತ್ತಿದ್ದರು. ಕ್ಷೇತ್ರದಲ್ಲಿ ಅಸ್ನೋಟಿಕರ್ ಅಭಿಮಾನಿಗಳ ಜೊತೆ ನಿಂತಿದ್ದ ಶುಭಲತಾರನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು.
2002 ರಿಂದ 2028 ರ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಉತ್ತರ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು.
ಮಗ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ರಾಜಕೀಯಕ್ಕೆ ಬಂದ ನಂತರ ಶುಭಲತಾ ರಾಜಕೀಯದಿಂದ ದೂರ ಉಳಿದಿದ್ದರು.







