ಸ್ಯಾಂಡಲ್​ವುಡ್ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

Chi Dattaraj Passed Away: ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ "ರುದ್ರಿ" ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಅವರ ಸಹೋದರ ಆಗಿದ್ದರು.

ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌.

Author

error: