ಹಾಸನ : ಒಂದು ಯೋಜನೆಯ ಯಶಸ್ಸನ್ನು ನೋಡುವುದು ಇಲ್ಲೇ. ಜನರ ಮನಸ್ಸಿನಲ್ಲಿ. ಅವರಲ್ಲಿ ಇರುವ ಪ್ರೀತಿ ಅಭಿಮಾನದಲ್ಲಿ. ಹೇಳಿಕೆಗಳಲ್ಲಿ ಅಲ್ಲ. ಹಾಸನ ಜಿಲ್ಲೆ ಅರಸೀಕರೆಯಲ್ಲಿ ನಡೆದ ಈ ಘಟನೆ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿನ ಬಗ್ಗೆ ಹೇಳುತ್ತದೆ.
ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿದಳು. ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದಳು.
ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು ಬಹುಶ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಹೇಳಿದ್ದಾರೆ.
