ಮೈಸೂರು : ಮಂಡ್ಯದ ಜನರಿಗೆ ಮಗ ಮತ್ತು ಕಳ್ಳ ನನ್ಮಗ ಯಾರು ಎಂಬುದನ್ನು ನಿರ್ಧರಿಸುವಂತೆ ಕರೆ ನೀಡಿರುವ ಚಿತ್ರ ನಟ ಪ್ರಕಾಶ್ ರೈ ಮುಂಬರುವ ಚುನಾವಣೆಯಲ್ಲಿ ಈ ನಿರ್ಧಾರವನ್ನು ಮಂಡ್ಯದ ಜನರೇ ಮಾಡುತ್ತಾರೆ ಎಂದಿದ್ದಾರೆ.
ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರೇ ದಾರಿ ತಪ್ಪಿದ ಮಗ ಎಂದು ನಟ ಪ್ರಕಾಶ್ ರೈ ವಾಗ್ಧಾಳಿ ನಡೆಸಿದರು.
ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ವತಿಯಿಂದ ರೈತ ಸಭಾಂಗಣದಲ್ಲಿ ನಡೆದ ಶ್ರಮಿಕರ ಸ್ವಾಭಿಮಾನಿ ಗೆಲುವಿನ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ ಎಂದು ಟೀಕಿಸಿದರು.
ಹೆಣ್ಣುಮಕ್ಕಳ ಬಗ್ಗೆ ಇಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡಲು ಇವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲವೇ ? ಎಂದು ಪ್ರಶ್ನಿಸಿದ ಅವರು, ಕಳೆದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರನ್ನು ’ಗಂಡ ಸತ್ತ ಮುಂಡೆ’ ಎಂದು ನಿಂದಿಸಿದ್ದಕ್ಕೆ ಮಂಡ್ಯ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅಂತದ್ದೆ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಈಗ ಮಹಿಳೆಯರು ಎಚ್ಚೆತ್ತುಕೊಳ್ಳಬೇಕು ಎಂದರು.






