ಬೆಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿಯೂ ಆಗಿರುವ ಅವರು ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗದಲ್ಲಿ ಅವರ ಪ್ರಚಾರ ಭಾಷಣದ ವ್ಯವಸ್ಥೆ ಮಾಡಲಾಗಿದೆ. ಈ ಸಭೆಯ ನಂತರ ಅವರು ಬೆಂಗಳೂರಿಗೆ ಆಗಮಿಸುವರು.
ಬೆಂಗಳೂರಿನ ಎಚ್ ಎಸ್ ಆರ್ ಬಡಾವಣೆಯಲ್ಲಿ ಅವರು ಪ್ರಚಾರ ಕೈಗೊಳ್ಳಲಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ರಾಮಲಿಂಗಾ ರೆಡ್ದಿ ಅವರೂ ಈ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
