ಆದಿವಾಸಿಗಳ ಹಕ್ಕಿಗಾಗಿ ಅನಿರ್ದಿಷ್ಟಾವಧಿ ಧರಣಿ

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಬೇಕೆಂದು ಕರ್ನಾಟಕ ಆದಿವಾಸಿಗಳ ಒಕ್ಕೂಟ ಕಳೆದ ಮೂರು ದಿನದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ವಿನಾಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ವಾಸಿಸುತ್ತಿರುವ ಜಾಗದಿಂದ ಖಾಲಿ ಮಾಡಿ ಎಂದು ಕಿರುಕುಳ ನೀಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡಬೇಕೆಂದು ಆದೇಶ ನೀಡಿದ್ದರು ನಮಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿರುವುದು ಖಂಡನೀಯ. ಈ ಕೂಡಲೇ ಕಂದಾಯ ಸಚಿವರು ಹಾಗೂ ರಾಜ್ಯ ಸರ್ಕಾರ ನಮಗೆ ನ್ಯಾಯ ನೀಡಬೇಕು ಎಂದು ಒತ್ತಾಯ ಮಾಡಿದರು. ಇನ್ನು ಅನಿರ್ದಿಷ್ಟಾವಧಿ ಹೋರಾಟಕ್ಕೆ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ಸಂಚಾಲಕ ಸಿರಿಮನೆ ನಾಗರಾಜ್ ಬೆಂಬಲಿಸಿ ಮಾತನಾಡಿ, ಈ ಸಮಸ್ಯೆಯನ್ನು ಪ್ಯಾಕೇಜ್ ರೀತಿ ಬಗೆಹರಿಸಬೇಕು. ತಕ್ಷಣವೇ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ರಾಜ್ಯಮಟ್ಟದಲ್ಲಿ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

0

Leave a Reply

Your email address will not be published. Required fields are marked *