Suddi Tv

Suddi Tv

ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಅಮೇರಿಕ ಜರ್ಮನಿ ಕಳವಳ; ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ದೆಹಲಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಾವಿರಾರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಸ್ತೆಗೆ ಇಳಿದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಈ ಕಾರ್ಯಕರ್ತರು ಯತ್ನ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆಪ್ ಹಿರಿಯ ನಾಯಕ ಸೋಮನಾಥ್ ಭಾರ್ತಿ, ದೆಹಲಿ ಅಸೆಂಬ್ಲಿ…

ಕೇಜ್ರಿವಾಲ್ ಬಂಧನ, ಕಾನೂನು ಪ್ರಕ್ರಿಯೆ ಮುಕ್ತವಾಗಿ, ನ್ಯಾಯಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ: ಭಾರತಕ್ಕೆ ಅಮೇರಿಕ ಸೂಚನೆ

ವಾಷಿಂಗ್ಟನ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಅಮೇರಿಕ ತೀಕ್ಷ ಪ್ರತಿಕ್ರಿಯೆ ನೀಡಿದೆ. ಕಾನೂನು ಪ್ರಕ್ರಿಯೆ ಮುಕ್ತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಅದು ಭಾರತಕ್ಕೆ ಸೂಚಿಸಿದೆ. ಈ ಬಂಧನಕ್ಕೆ ಸಂಬಂಧಿಸಿದಂತೆ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೇರಿಕ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಈಗಾಗಲೇ ಹಲವು…

ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; ಚೀನಾದ ಐವರು ದುರ್ಮರಣ..

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿ ನಡೆದಿದೆ. ಈ ದಾಳಿಯಲ್ಲಿ ಆರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ದಾಳಿಕೋರರು ಚೀನಿ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಸ್ಥಳೀಯ ಅಧಿಕಾರಿಗಳ ಪ್ರಕಾರ, ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಶಾಂಗ್ಲಾದಲ್ಲಿ ಆತ್ಮಾಹುತಿ ಬಾಂಬರ್ ನಡೆಸಿದ ಬಾಂಬ್ ಸ್ಫೋಟದಲ್ಲಿ ಆರು ಚೀನೀ ಪ್ರಜೆಗಳು ಅಸು ನೀಗಿದರು. ಮತ್ತೊಂದೆಡೆ ದಾಳಿಕೋರರು…

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯಿಂದ ಇಂದು ಭಾರತ ವಿಶ್ವಗುರು ಆಗಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು,…

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ಸಂದರ್ಭದಲ್ಲಿ ಅವರು…

ಮತದಾನದ ಮೂಲಕ ಜನರೇ ಕಾಂಗ್ರೆಸ್ ನವರ ಕಪಾಳಕ್ಕೆ ಹೊಡೆಯುತ್ತಾರೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲ್ ಹಾಕಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ…

ಧರ್ಮದ ಆಧಾರದ ಮೇಲೆ ಪೌರತ್ವ ನೀಡುವುದು ಸರಿಯಲ್ಲ; ಅಮೇರಿಕ ಕಳವಳ

ವಾಷಿಂಗ್ಟನ್ : ಭಾರತದಲ್ಲಿ ಜಾತಿ ಮತ್ತು ಕೋಮು ಆಧಾರದ ಮೇಲೆ ಪೌರತ್ವ ನೀಡುವ ಕುರಿತು ಅಮೇರಿಕದಲ್ಲಿ ಕಳವಳ ವ್ಯಕ್ತವಾಗಿದೆ. ಭಾರತದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೇರಿಕದ ಅಂತಾರಾಷ್ಟ್ರ‍ೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತಾದ ಆಯೋಗ ಧರ್ಮ ಮತ್ತು ಕೋಮು ಆಧಾರದ ಮೇಲೆ ಪೌರತ್ವ ನೀಡುವುದಾಗಲೀ ನಿರಾಕರಿಸುವುದಾಗಲಿ ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಧರ್ಮ…

ನಾನು ರಾಜಕಾರಣಿಯಾಗಿ ವಿಫಲ; ಸಂಸದನಾಗಿ ಸಫಲ: ಪ್ರತಾಪ ಸಿಂಹ

ಬೆಂಗಳೂರು : ಮೈಸೂರಿನ ಸಂಸದ ಪ್ರತಾಪ ಸಿಂಹ ಅವರಿಗೆ ಈಗ ಆತ್ಮಾವಲೋಕನದ ಕಾಲ.. ಈಗ ಅವರು ಅದನ್ನೇ ಮಾಡುತ್ತಿದ್ದಾರೆ. ಅವರು ತಮಗೆ ಟಿಕೆಟ್ ತಪ್ಪುತ್ತಿದೆ ಎಂದುಕೊಂಡಿರಲಿಲ್ಲ. ಆದರೆ ತಪ್ಪಿ ಹೋಯಿತು. ಉಗ್ರ ಹಿಂದುತ್ವ ತಮ್ಮನ್ನು ಕೈ ಹಿಡಿಯುತ್ತದೆ ಎಂದು ನಂಬಿದ್ದ ಅವರು ಟಿಪ್ಪೂವಿನಿಂದ ಗುಂಭಜ್ ವರೆಗೆ ತಾವೇ ವಿವಾದವನ್ನು ಸೃಷ್ಟಿಸುತ್ತಿದ್ದರು. ತಾವೇ ಸೃಷ್ಟಿಸಿದ ವಿವಾದದ ರಾಜಕೀಯ…

ನೀವು ರಾಮನ ಪಾತ್ರ ಮಾಡಿದರೂ ಸರಿ, ಪ್ರಧಾನಿ ಮೋದಿ ಪಾತ್ರ ಮಾಡಿದರೂ ಸರಿ, ನಿಮಗೆ ಬಿಜೆಪಿ ಸೀಟು ಗ್ಯಾರಂಟಿ ! ಎರಡೂ ಮಾಡಿದರೆ ಡಬ್ಬಲ್ ಗ್ಯಾರಂಟಿ !!

ಬಿಜೆಪಿಗೂ ಚಿತ್ರ ನಟರಿಗೂ ಅವಿನಾಭಾವ ಸಂಬಂಧ. ಮೊದಲಿನಿಂದಲೂ ಬಿಜೆಪಿ ಚಿತ್ರ ನಟರಿಗೆ ಟಿಕೆಟ್ ನೀಡುತ್ತಲೇ ಬಂದಿದೆ..ಇದಕ್ಕೆ ಕಾರಣ ಏನು ? ನಟರು ರಾಜಕೀಯದಲ್ಲೂ ಚೆನ್ನಾಗಿ ನಟಿಸಬಹುದು ಎಂಬ ನಂಬಿಕೆ ಕಾರಣ ಇರಬಹುದೆ ? ಇದ್ದರೂ ಇರಬಹುದು. ಆದರೆ ಎಲ್ಲ ಚಿತ್ರ ನಟರೂ ರಾಜಕೀಯದಲ್ಲಿ ಚೆನ್ನಾಗಿ ನಟಿಸುತ್ತಾರೆ ಎಂದು ಹೆಳಲು ಸಾಧ್ಯವಿಲ್ಲ. ಕೆಲವು ಸಂದರ್ಭದಲ್ಲಿ ನಟರಿಗಿಂತ ರಾಜಕಾರಣಿಗಳೇ…

error: