ಹಂತ ಹಂತವಾಗಿ ರಾಜೀವ್ ಗಾಂಧಿ ವಿವಿ ರಾಮನಗರಕ್ಕೆ ಸ್ಥಳಾಂತರ: DCM ಡಿ.ಕೆ. ಶಿವಕುಮಾರ್

DCM D K Shivakumar: ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ










