ಖುದ್ದು ಹಾಜರಾತಿಯಿಂದ ವಿನಾಯಿತಿ ಪಡೆದ ಬಿಜೆಪಿ ನಾಯಕರು

ಲಖ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಕ್ರಿಮಿನಲ್ ಪಿತೂರಿ ಆರೋಪ ಹೊತ್ತಿರುವ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿಯವರಿಗೆ ಪ್ರತಿದಿನ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ವಯಸಿನ ಕಾರಣದಿಂದಾಗಿ ವಿನಾಯಿತಿ ನೀಡಲಾಗಿದೆ.

ಸುಪ್ರೀಂ ಕೋರ್ಟ್​​ ನಿರ್ದೇಶನದ ಅನ್ವಯ ಲಖ್ನೋನ ಸಿಬಿಐ ವಿಶೇಷ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಹಿರಿಯ ನಾಯಕರ ವಿರುದ್ಧದ ಕ್ರಿಮಿನಲ್ ಪಿತೂರಿ ಆರೋಪದ ಕುರಿತು ವಿಚಾರಣೆ ನಡೆಸುತ್ತಿದೆ. ಆದರೆ, ಇಂದು ಬಿಜೆಪಿಯ ಹಿರಿಯ ನಾಯಕರಿಗೆ ಪ್ರತಿದಿನದ ವಿಚಾರಣೆಯಿಂದ ವಿನಾಯಿತಿ ನಿಡಲಾಗಿದೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ.

ಮೇ 30ರಂದು ಕಡ್ಡಾಯವಾಗಿ ಹಾಜರಾಗುವಂತೆ ಲಖ್ನೋದ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ, ಭಾರತಿ ಸೇರಿದಂತೆ 12 ಆರೋಪಿಗಳಿಗೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿತ್ತು. ಬಿಜೆಪಿಯ ವಿನಯ್ ಕಟಿಯಾರ್, ವಿಎಚ್​​ಪಿಯ ಹರಿ ದಾಲ್ಮಿಯ ಮತ್ತು ಸಾಧ್ವಿ ರಿತಾಂಬರ ಅವರು ಕೂಡ ಕೋರ್ಟ್​​ನಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿತ್ತು. ಇನ್ನು ಈ ವೇಳೆ ತಮ್ಮ ಮೇಲಿನ ದೋಷಾರೋಪವನ್ನು ಕೈಬಿಡಬೇಕು ಎಂದು ಆರೋಪಿಗಳು ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು.

ಪ್ರದೀಪ್ ಮಾಲ್ಗುಡಿ ನ್ಯಾಷನಲ್ ಡೆಸ್ಕ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *