ಬೆಂಗಳೂರು : ಇಂದು ಮಂಗಳವಾರ ಬೆಂಗಳೂರಿನ ಐತಿಹಾಸಿಕ ಕರಗ ಶಕ್ತ್ಯೋತ್ಸವ ಸಂಭ್ರಮ. ನಗರದ ಧರ್ಮರಾಯಸ್ವಾಮಿ ದೇವಾಲಯ ಇದಕ್ಕಾಗಿ ಸಜ್ಜುಗೊಳ್ಳುತ್ತಿದೆ. ಎ ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರಲಿದ್ದಾರೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್ 23 ರ ಬೆಳಗ್ಗೆ 6 ಗಂಟೆಯಿಂದ ಏಪ್ರಿಲ್ 24 ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರು ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ದಯಾನಂದ ಆದೇಶ ನೀಡಿದ್ದಾರೆ.
ಸಿಟಿ ಮಾರ್ಕೆಟ್, ಕಲಾಸಿಪಾಳ್ಯಂ, ಕಾಟನ್ಪೇಟೆ ಮತ್ತು ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಯಲ್ಲಿರಲಿದೆ.
ಬಾರ್ಗಳು, ವೈನ್ ಸ್ಟೋರ್ಗಳು, ಪಬ್ಗಳು ಮತ್ತು ಮದ್ಯ ಮಾರಾಟ ಮಾಡುವ ಇತರ ಸ್ಥಳಗಳಲ್ಲಿ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಸಿಎಲ್ -4 (ಕ್ಲಬ್ಗಳು) ಮತ್ತು ಸಿಎಲ್ -6 ಎ ಪರವಾನಗಿಗಳನ್ನು ಹೊಂದಿರುವ ಸ್ಟಾರ್ ಹೋಟೆಲ್ಗಳಿಗೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
