ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ತುರ್ತು ವಿಚಾರಣೆ ತಿರಸ್ಕರಿಸಿದ ಕೋರ್ಟ್​​

ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಐಪಿಎಸ್ ಅಧಿಕಾರಿ ಆರ್ ಎಸ್ ಭಗೋರಾ ತುರ್ತು ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಲಾಗಿದೆ. ಮುಂಬೈನ ವಿಚಾರಣಾ ಕೋರ್ಟ್ ಮೇ 8ರಂದು ಭಗೋರಾ ಸೇರಿದಂತೆ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​​ನ ಸಿಎಂ ಆಗಿದ್ದ ಅವಧಿಯಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದ ನಂತರ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು. ನಂತರ ಅವರ ಸಂಬಂಧಿಕರನ್ನು ಅವರ ಕಣ್ಣೆದುರೇ ಹತ್ಯೆಗೈಯಲಾಗಿತ್ತು. 2002ರಲ್ಲಿ ಈ ಪ್ರಕರಣ ನಡೆದಿತ್ತು. 15 ವರ್ಷಗಳ ಬಳಿಕ ವಿಚಾರಣಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿತ್ತು. ಆದರೆ, ಈ ಕುರಿತು ತಕರಾರು ತೆಗೆದಿದ್ದ ಭಗೋರಾ ಜೀವಾವಧಿ ಶಿಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಮಾರ್ಚ್ 1, 2002ರಂದು 19 ವರ್ಷದ ಮತ್ತು 5 ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಲ್ಲದೇ ಅವರ ಕುಟುಂಬದ 3 ವರ್ಷದ ಹಸುಳೆ ಸೇರಿದಂತೆ ಒಟ್ಟು 14 ಜನರನ್ನು ಹತ್ಯೆಗೈಯಲಾಗಿತ್ತು.

2008ರಲ್ಲಿ 13 ಜನರ ಆರೋಪಿಗಳ ವಿರುದ್ಧ ಆರೋಪ ಸಾಬೀತುಗೊಳಿಸುವಲ್ಲಿ ಬಿಲ್ಕಿಸ್ ಬಾನು ಯಶಸ್ವಿಯಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಂ ಶಾ, ಬಿಪಿನ್ ಚಂದ್ರ ಜೋಷಿ, ಕೇಸರಿಭಾಯ್ ವೊಹಾನಿಯ, ಪ್ರದೀಪ್ ಮೊರ್ಧಿಯ, ಬಕಭಾಯ್ ವೊಹಾನಿಯ, ರಾಜುಭಾಯಿ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನ ಅವರು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ, ಜನವರಿ 21, 2008ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ಶಿಕ್ಷೆಯನ್ನು ಜಾರಿಗೆ ತರುವಂತೆ ಮೇ 8ರಂದು ವಿಚಾರಣಾ ನ್ಯಾಯಾಲಯ ನಿರ್ದೇಶನ ನೀಡಿತ್ತು. ಸಿಬಿಐ ಪ್ರಕರಣದ ಪ್ರಮುಖ ರೂವಾರಿಗಳಾದ 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಕೂಡ ಮನವಿ ಮಾಡಿತ್ತು. ಆದರೆ, ಎಲ್ಲ ಆರೋಪಿಗಳಿಗೂ ಜೀವಾವಧಿ ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು.

ಪ್ರದೀಪ್ ಮಾಲ್ಗುಡಿ ನ್ಯಾಷನಲ್ ಡೆಸ್ಕ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *