ರೈತರ ಸಮಸ್ಯೆಗೆ ಬಿಜೆಪಿ ಸರ್ಕಾರಗಳು ಕಿವುಡಾಗಿವೆ: ಸೀತಾರಾಂ ಯೆಚೂರಿ

ನವದೆಹಲಿ: ಮಧ್ಯಪ್ರದೇಶ ರೈತರ ಪ್ರತಿಭಟನೆಯನ್ನು ಆಧರಿಸಿ ಬಿಜೆಪಿ ಸರ್ಕಾರಗಳ ವಿರುದ್ಧ ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದಿಂದ ಮಹಾರಾಷ್ಟ್ರದವರೆಗಿನ ರೈತರು ಸಾಲ ಮನ್ನಾಗೆ ಆಗ್ರಹಿಸಿದ್ದಾರೆ. ಬಿಜೆಪಿ ನೀಡಿರುವ ಎಲ್ಲ ಭರವಸೆಗಳ ನಡುವೆ ರೈತರ ಸಮಸ್ಯೆಗಳನ್ನು ಕೇಳಿಸಿಕೊಳ್ಳುವ ವಿಷಯದಲ್ಲಿ ಕಿವುಡಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ರೈತರು ಜೂನ್ ಒಂದರಂದು ಸೂಕ್ತ ಬೆಂಬಲ ಬೆಲೆ, ಸಾಲ ಮನ್ನಾ ಮತ್ತು 60 ವರ್ಷ ಮೇಲ್ಪಟ್ಟ ರೈತರಿಗೆ ವೃದ್ಧಾಪ್ಯ ವೇತನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ರಸ್ತೆಯಲ್ಲಿ ಹಾಲು ಸುರಿಯುವ ಮೂಲಕ ಮಹಾರಾಷ್ಟ್ರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಮಧ್ಯಪ್ರದೇಶದ ರೈತರು ಕೂಡ ಇಂಥದ್ಧೇ ಬೇಡಿಕೆಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಾತುಕತೆ ನಡೆಸಿದ ನಂತರ ರೈತರು ಪ್ರತಿಭಟನೆಯನ್ನು ಕೈಬಿಟ್ಟಿದ್ದರು.

0

Leave a Reply

Your email address will not be published. Required fields are marked *