ಬೆಂಗಳೂರು : ಕಲ್ಯಾಣ ಕರ್ನಾಟಕದ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಮಾಲಿಕಯ್ಯ ಗುತ್ತೇದಾರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಮೂಲತಃ ಕಾಂಗ್ರೆಸ್ಸಿಗರೇ ಆಗಿದ್ದ ಗುತ್ತೇದಾರ್ ಅವರು ಬಿಜೆಪಿಯಲ್ಲಿದ್ದರು. ಇತ್ತೀಚಿನ ಬೆಳವಣಿಗೆಯಲ್ಲಿ ಅವರ ಸಹೋದರ್ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದು ಅವರ ಕೋಪಕ್ಕೆ ಕಾರಣವಾಗಿತ್ತು.
ಕಲಬುರ್ಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕರು, ಸಚಿವರೂ ಆಗಿ ಕೆಲಸ ಮಾಡಿರುವ ಗುತ್ತೇದಾರ್ ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಕಟ್ಟಾ ಅನುಯಾಯಿಯಾಗಿದ್ದರು.
ಈಗ ಕಾಂಗ್ರೆಸ್ ಗೆ ಅವರು ವಾಪಸ್ ಬಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಗುಲ್ಬರ್ಗ ಜಿಲ್ಲೆಯಲ್ಲಿ ಹೆಚ್ಚು ಶಕ್ತಿ ತುಂಬಲಿದೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಿದರು.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.







