ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಮುರುಘರಿಗೆ ವಾಪಸ್ ಜೈಲು; ಜಾಮೀನು ರದ್ದುಪಡಿಸಿದ ಸುಪ್ರೀಂ

Murugha Mutt Shri Bail Cancel: ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣಾ ನ್ಯಾಯಾಲಯದ ಮುಂದೆ ಒಂದು ವಾರದ ಒಳಗೆ ಹಾಜರಾಗಬೇಕು

ನವದೆಹಲಿ : ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಕರ್ನಾಟಕ ರಾಜ್ಯದ ಚಿತ್ರದುರ್ಗದ ಮುರುಘಾ ಶರಣರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಜಾಮೀನಿನ ಮೇಲೆ ಹೊರಗಿದ್ದ ಶಿವಮೂರ್ತಿ ಈಗ ವಾಪಸ್ ಜೈಲಿಗೆ ಹೋಗಬೇಕಾಗಿದೆ.

ಡಿ.ರಾಜಪ್ಪ ಎಂಬವರು ಕೆಳ ಹಂತದ ನ್ಯಾಯಾಲಯ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು. ಇದು ನ್ಯಾಯಮೂರ್ತಿ ವಿಕ್ರಮನಾಥ್ ಅವರ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಬಂದಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರು ವಿಚಾರಣಾ ನ್ಯಾಯಾಲಯದ ಮುಂದೆ ಒಂದು ವಾರದ ಒಳಗೆ ಹಾಜರಾಗಬೇಕು. ಅವರು ಬಂಧನದಲ್ಲಿ ಇರುವಾಗಲೇ ಸಾಕ್ಷಿಗಳ ವಿಚಾರಣೆ ನಡೆಯಬೇಕು ಎಂದು ತಿಳಿಸಿದೆ.

ವಿಚಾರಣೆಯನ್ನು ನಾಲ್ಕು ತಿಂಗಳೊಳಗೆ ಮುಗಿಸಬೇಕು. ಇದಕ್ಕೂ ಹೆಚ್ಚಿನ ಕಾಲಾವಕಾಶ ಬೇಕಾದರೆ ಆಗ ಸರ್ವೋಚ್ಚ ನ್ಯಾಯಾಲಯಕ್ಕೆ ಬರಬೇಕು ಎಂದು ಹೇಳಿದೆ.

Author

error: