Category ರಾಜ್ಯ

ಯುವ, ಮಹಿಳಾ ಮತ್ತು ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ ಹಂಚಿಕೆ: ಡಿ.ಕೆ.ಶಿವಕುಮಾರ್

D K SHIVAKUMAR

ಬೆಂಗಳೂರು: “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಸಚಿವರ…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಅಯೋಮಯ: ಬಸವರಾಜ ಬೊಮ್ಮಾಯಿ

ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ ನಡೆಸಿದ…

ಯಾವುದೇ ಕಾರಣಕ್ಕೆ ಕಾಂಗ್ರೆಸ್ ಸೇರುವುದಿಲ್ಲ : ಡಿ ವಿ ಸದಾನಂದ ಗೌಡ ಸ್ಪಷ್ಟನೆ

ಬೆಂಗಳೂರು; ಬೆಂಗಳೂರು ಉತ್ತರ ಟಿಕೆಟ್‌ ಕೈತಪ್ಪಿದ್ದರಿಂದ ನನಗೆ ನೋವಾಗಿರುವುದು ನಿಜ. ಆದರೆ ನಾನು ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ  ಸಂಸದ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು. ಸಂಜಯ ನಗರ ನಿವಾಸದಲ್ಲಿ ಇಂದು ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ.…

‘ಇಂಡಿಯಾ’ ಗೆದ್ದರೆ ಮೇಕೆದಾಟು ಯೋಜನೆ ತಡೆಯುತ್ತೇವೆ ಎಂದಿರುವ ಡಿಎಂಕೆ ನಡೆ ಖಂಡನಾರ್ಹ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್‌ ಅವರ ನಡೆ ಖಂಡನಾರ್ಹ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆ ಎಂ.ಕೆ. ಸ್ಟಾಲಿನ್‌ ನೇತೃತ್ವದ ಡಿಎಂಕೆ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿಚಾರವಾಗಿ…

ಸಂಪಾದಕೀಯ : ಕೇಸರಿ ಕುಂಡದಲ್ಲಿ ದಹಿಸಿದ ಸಮಾಜವಾದ; ಈ ಬಾರಿ ಗೆಲ್ಲುತ್ತಾರಾ ಗೀತಾ ಶಿವರಾಜಕುಮಾರ್

ಶಿವಮೊಗ್ಗ..ಒಂದು ಕಾಲದಲ್ಲಿ ಸಮಾಜವಾದದ ನೆಲ.. ಕಾಗೋಡು ಸತ್ಯಾಗ್ರಹದ ಭೂಮಿ..ಶಾಂತವೇರಿ ಗೋಪಾಲ ಗೌಡ, ಕಾಗೋಡು ತಿಮ್ಮಪ್ಪ, ಎಸ್. ಬಂಗಾರಪ್ಪ, ಜೆ.ಎಚ್. ಪಟೇಲ್ ಹೀಗೆ ಸಮಾಜವಾದ ಬೆಳೆ ಬಿತ್ತಿದವರು ಹಲವರು.. ರಾಷ್ಟ್ರ ಕವಿ ಕುವೆಂಪು, ಜಿ.ಎಸ್. ಶಿವರುದ್ರಪ್ಪ, ಯು.ಆರ್. ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ ಮಾನವೀಯ ಮನಸ್ಸುಗಳನ್ನು ಅರಳಿಸಿದವರು. ಇಂತಹ ಶಿವಮೊಗ್ಗ 90 ರ ದಶಕದಲ್ಲಿ ಬದಲಾಗತೊಡಗಿತು. ಸಮಾಜವಾದ ಚಳವಳಿ…

ನಗರ್ತಪೇಟೆಯಲ್ಲಿ ಧ್ವೇಷ ಭಾಷಣ; ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಘಟನೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮೊಬೈಲ್ ಅಂಗಡಿ ಗಲಾಟೆಗೆ ಸಂಬಂಧಿಸಿದಂತೆ ಕಳೆದ…

ಹಿಂದೂ ಧಾರ್ಮಿಕ ದತ್ತಿ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದಾರೆ. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆ ಕುರಿತು ಕೆಲವೊಂದು ವಿವರಗಳನ್ನು ರಾಜ್ಯ…

ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ..

ನವದೆಹಲಿ : ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ದೆಹಲಿಯ ಆಸ್ಪತ್ರೆಯೋದರಲ್ಲಿ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಮೆದುಳಿನಲ್ಲಿ ಆಗುತ್ತಿರುವ ರಕ್ತ ಸ್ರಾವವನ್ನು ತಡೆಯಲೂ ಈ ಶಸ್ತ್ರ ಚಿಕಿತ್ಸೆ ನಡೆಸಲಾಯಿತು ಎಂದು ಇಂದ್ರಪ್ರಸ್ತ ಆಪೋಲೋ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮಾರ್ಚ್ 17 ರಂದು ಈ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.…

ಮಂಡ್ಯ ಟಿಕೆಟ್ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ- ಸುಮಲತಾ

ಬೆಂಗಳೂರು: ಮಂಡ್ಯ ಲೋಕಸಭಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ ನಂತರ ಮಾತನಾಡುತ್ತಿದ್ದ ಅವರು ಇದೇ ತಿಂಗಳ 22 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಅವರು…

ಚುನಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹುಮುಖ್ಯ: ಮನೋಜ್ ಕುಮಾರ್ ಮೀನಾ

ಬೆಂಗಳೂರು : ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮಾಧ್ಯಮಗಳ ಭಾಗವಹಿಸುವಿಕೆ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲೋಕಸಭಾ ಚುನಾವಣೆ –…