Water Project : ವಿಜಯಪುರ ನಗರಕ್ಕೆ 52 ಕೋಟಿ ವೆಚ್ಚದಲ್ಲಿ ಹೊಸ ಕೊಳವೆ ಮಾರ್ಗ: ಸಚಿವ ಎಂ ಬಿ ಪಾಟೀಲ್

Water Project : ಸುಮಾರು 10.8 ಕಿ.ಮೀ ಉದ್ದದ ಪಿ.ಎಸ್.ಸಿ ಕೊಳವೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಇದರಿಂದ ನೀರಿನ ಸೋರಿಕೆ ವಿಪರೀತ ಹೆಚ್ಚಾಗಿದೆ. ಇದನ್ನು ಬದಲಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ವಿವಿಧ ಕಾರಣಗಳಿಂದಾಗಿ ಆಗಿರಲಿಲ್ಲ. ಆದರೆ, ಈಗ ಅದಕ್ಕೆ ಅಂತಿಮ ಮುದ್ರೆ ಒತ್ತಿದ್ದು, ಹಣ ನೀಡಲು ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.









