ಪರಿಸರ ಸೂಕ್ಷ್ಮ ವಲಯ (ESZ) ಘೋಷಣೆಯಿಂದ ಸ್ಥಳೀಯರಿಗೆ ತೊಡಕಿಲ್ಲ: ಸಚಿವ ಈಶ್ವರ ಖಂಡ್ರೆ

ರಾಜ್ಯದ 4 ವನ್ಯಜೀವಿಧಾಮಗಳ ವ್ಯಾಪ್ತಿಯಲ್ಲಿ ಕನಿಷ್ಠ 1 ಕಿ.ಮೀ. ನಿಂದ 10 ಕಿ.ಮೀಟರ್ ವರೆಗೆ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಲಾಗುತ್ತಿದ್ದು, ಜನವಸತಿ, ಜಮೀನು ಇರುವ ಪ್ರದೇಶದಲ್ಲಿ ಕೇವಲ 1 ಕಿ.ಮೀ ಮಾತ್ರವೇ ಘೋಷಿಸುವ ಕಾರಣ ಇದರಿಂದ ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ.









