Category ಲೋಕಸಭೆ – ಚುನಾವಣೆ

ನಾಳೆ ಕರ್ನಾಟಕಕ್ಕೆ ಅಮಿತ್ ಷಾ. ರಾಜ್ಯ ಬಿಜೆಪಿಯ ಸಮಸ್ಯೆಗೆ ಅವರ ಬಳಿ ಪರಿಹಾರ ಇದೆಯೆ ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ರೋಡ್ ಶೋ ಬೆಂಗಳೂರಿನಲ್ಲಿ ಸಭೆ ಹಾಗೂ ಕೋರ್ ಕಮೀಟಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಚುನಾವಣೆಯ ನಾಮಪತ್ರಗಳ ಸಲ್ಲಿಕೆ ಪ್ರಾರಂಭವಾಗಿರುವ ಈ ಸಂದರ್ಭದಲ್ಲಿ ಬಿಜೆಪಿಯ ಮುಂದೆ ಹಲವು ರೀತಿಯ ಸವಾಲುಗಳಿವೆ. ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ಭಿನ್ನಾಭಿಪ್ರಾಯಗಳು ಬಹುದೊಡ್ಡ…

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ತಾನೇ ನಡೆಸಿದ ಆಂತರಿಕ ಸಮೀಕ್ಷೆಯಿಂದ BJP ಗೆ ಸ್ಪಷ್ಟವಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು ಗೆಲ್ಲುವುದೂ ಕಷ್ಟ ಎನ್ನುವುದು ಗೊತ್ತಾಗಿದೆ. ಹೀಗಾಗಿ ತಂತ್ರಗಾರಿಕೆ ಕಾರಣದಿಂದ 400 ಸೀಟು ಗೆಲ್ಲುವುದಾಗಿ ಹೇಳುತ್ತಿದೆ. ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ತವರಿನಲ್ಲಿ ಸಿಎಂ. ಗೆಲುವಿಗಾಗಿ ಕಾರ್ಯತಂತ್ರ. ಬಿಜೆಪಿಗೆ ಸೋಲಿನ ರುಚಿ ತೋರಿಸುವರೆ ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ. ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ…

ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ ಬಿಜೆಪಿ ವಿರುದ್ಧ ದೂರು.. ಚುನಾವಣಾ ಬಾಂಡ್ ಕುರಿತು ತನಿಖೆಗೆ ಆದೇಶಿಸಿ

India Blocs Mega Rally : ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹಕ್ಕೊತ್ತಾಯ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ

ಮಗನ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಮುಂದಾದರಾ ಸುಮಲತಾ ?

ಬೆಂಗಳೂರು : ಇವತ್ತು ಸಂಸತ್ ಸದಸ್ಯೆ ಸುಮಲತಾ ಅವರನ್ನು ಮಾಜಿ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಮಾತುಕತೆಯ ನಂತರ ಉದ್ಭವವಾದ ಪ್ರಶ್ನೆ ಎಂದರೆ ಸುಮಲತಾ ತಣ್ಣಗಾದರಾ? ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಒಪ್ಪಿದರಾ ? ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ ಇಂತಹ ಇಂಗಿತವನ್ನು ವ್ಯಕ್ತಪಡಿಸಿದರು. ಸುಮಲತಾ ಕೂಡ ಇದು ಸ್ಪೀಡ್ ಬ್ರೇಕರ್ ಇದ್ದಂತೆ.…

ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಯಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ  ಪ್ರಚಾರ ಮಾಡುವ ವೇಳೆ ಸುದ್ದಿಗಾರರು ಕೇಳಿದ…

ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಿಂಚೋಳಿ ತಾಲೂಕಿನ ಕೊರವಿ ದೊಡ್ಡ ತಾಂಡದಲ್ಲಿ ನಡೆಯುತ್ತಿರುವ ಕಾಳಿಕಾದೇವಿ ದೇವಾಲಯದ ಜಾತ್ರ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ತಾವು…

ಮೋದಿ ಪ್ರಧಾನಿ ಮಾಡಲು ಪರಿಶಿಷ್ಟರ ಸಂಕಲ್ಪ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿ ಅವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು…

ಕಾಂಗ್ರೆಸ್ ನವರು ತೆರಿಗೆ ವಂಚನೆ ಮಾಡಿದರೆ ಪ್ರಶ್ನಿಸಬಾರದೇ: ಬಸವರಾಜ ಬೊಮ್ಮಾಯಿ

ಗದಗ: ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಒಂದಾಗಿರುವುದರಿಂದ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಸ್…