Category Bangaluru

ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್​​ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

MP Basavaraj Bommai: ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ನಮ್ಮದು ಸ್ಪಷ್ಟ ನಿಲುವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ: CM ಸಿದ್ದರಾಮಯ್ಯ

CM Siddaramaiah: ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ

ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಸಮಯ ನಿಗದಿ ಇಲ್ಲ: ಸಚಿವ ಕೃಷ್ಣ ಬೈರೇಗೌಡ

E-Khata-Accounts: ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ

ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

D K Suresh : ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಪ್ರಭಾವಿ ಸಚಿವರು. ಕನಕಪುರ ವಿಧಾನ ಸಭಾ ಕ್ಷೇತ್ರದ ಕೆಲವು ಅಭಿವೃದ್ಧಿ ಯೋಜನೆಗಳ ಮಂಜೂರಾತಿ ಬಗ್ಗೆ ಅವರ ಜತೆ ಚರ್ಚೆ ಮಾಡಲಾಯಿತು

ಯಲಹಂಕ ಬಳಿ 153 ಎಕರೆಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಈಶ್ವರ ಖಂಡ್ರೆ

Salumarad Thimmakka Botanical Garden :ಯಲಹಂಕ ಸುತ್ತುಮುತ್ತ ಬೆಂಗಳೂರು ವ್ಯಾಪಕವಾಗಿ ಬೆಳೆದಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಇಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ ತಾಣವಾಗುತ್ತದೆ ಎಂದರು.

KSRTC Dasara Bus: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

: KSRTC Dasara Busಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು‌ ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ

ಎಲ್ಲರ ಒಳಿತಿಗಾಗಿ ಅರುಣಾಚಲೇಶ್ವರನಲ್ಲಿ ಪ್ರಾರ್ಥನೆ: DCM ಡಿ. ಕೆ. ಶಿವಕುಮಾರ್

DCM D K Shivakumr Temple Visit: ಕಳೆದ ವರ್ಷಕ್ಕೆ ಹೋಲಿಸಿದರೆ, ದೇವಸ್ಥಾನವನ್ನು ತಮಿಳುನಾಡು ಸರ್ಕಾರ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಇದು ನನಗೆ ಹೆಚ್ಚು ಸಂತೋಷವನ್ನು ನೀಡಿತು

ಮೂಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ: ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ

H D Kumaraswamy: ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ

34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಸೂಚನೆ

JOB VACANCIES IN KARNATAKA: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಅವರು ಸೂಚಿಸಿದರು.

HMT ಕಾರ್ಖಾನೆ ಪುನರುದ್ಧಾರಕ್ಕೆ ಪ್ರಯತ್ನಗಳು ನಡೆದಿವೆ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಕಾರ್ಖಾನೆ ಉಳಿಸುವ ವಿಚಾರದಲ್ಲಿ ನಾನು ರಾಜಿ ಆಗಲ್ಲ, ಅದಕ್ಕೆ ಅಗತ್ಯ ಸಲಹೆ ಪಡೆಯಲು ಒಂದು ಸಲಹಾ ಸಂಸ್ಥೆಯನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ. ನೀತಿ ಆಯೋಗದ ಜತೆಯೂ ಸಮಾಲೋಚನೆ ನಡೆಸುತ್ತಿದ್ದೇನೆ. ಒಳ್ಳೆಯ ದಿನ ಬರಬಹುದು.