Category Bangaluru

ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ಇಡಿ ಪ್ರಯತ್ನದ ವಿರುದ್ಧ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಅವರ ಅಕ್ರಮಗಳ ಬಗ್ಗೆ ಮಾತನಾಡದಂತೆ ನಮ್ಮ ಬಾಯನ್ನು ಮುಚ್ಚಿಸಲು, ನಮಗೆ ಹೆದರಿಸಿ, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ರಾಜ್ಯದ ಅಧಿಕಾರಿಗಳಿಂದ ಬಲವಂತವಾಗಿ ಹೆಸರು ಹೇಳಿಸುವ ಪ್ರಯತ್ನ ನಡೆಯುತ್ತಿದೆ.

ಹಕ್ಕುಗಳಿಗಾಗಿ ಹೋರಾಟ ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ಕರ್ತವ್ಯ ನಿರ್ವಹಿಸುವುದೂ ಅಷ್ಟೇ ಮುಖ್ಯ: ಪ್ರಿಯಾಂಕ್‌ ಖರ್ಗೆ

Minister Priyank Kharge: ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

Minister Lakshmi Hebbalkar: ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್ ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ

ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ

CM Siddaramaiah : ಜಾರಿ ನಿರ್ದೇನಾಲಯದವರು ಕಲ್ಲೇಶ್ ಅವರಿಗೆ ಹೆದರಿಸಿ, ಬೆದರಿಸಿ, ಜೀವ ಭಯ ಉಂಟು ಮಾಡಿ ಅನಗತ್ಯವಾಗಿ ನನ್ನ  ಹೆಸರು ಹೇಳುವಂತೆ  ಬೆದರಿಸಿದ್ದಾರೆ. ಪ್ರಕರಣದಲ್ಲಿ ಕಾನೂನಿನ ಪ್ರಕಾರ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಒತ್ತಾಯಿಸಿದ್ದಾರೆ. ಕಲ್ಲೇಶ್ ದೂರು ನೀಡಿ ಪ್ರಕರಣ ದಾಖಲಾಗಿದೆ

ರೈತನಿಗೆ ಮಾಲ್ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿದಂತೆ ಇತರೆಡೆ ಪ್ರವೇಶಕ್ಕೆ ಶೀಘ್ರ ವಸ್ತ್ರ ಸಂಹಿತೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಜಿ.ಟಿ ಮಾಲ್ ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ಚೆಕ್ ಮುಖಾಂತರ ಬಾಕಿ ತೆರಿಗೆ ಪಾವತಿ ಮಾಡಿದ್ದಾರೆ

ಕುಮ್ಕಿ ಜಮೀನಿನ ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

Minister Krishna Byre Gowda: ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್‌ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ.

ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ : ಡಿಕೆಶಿಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ

Central Minister H D Kumaraswamy : ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ. ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ

ವಾಲ್ಮೀಕಿ ನಿಗಮದ 40 ಕೋಟಿ ರೂ. ಹಣ ಖಜಾನೆಯಿಂದ ನೇರವಾಗಿ ಬೇರೆ ಖಾತೆಗಳಿಗೆ ವರ್ಗಾವಣೆ : ಬಸವರಾಜ ಬೊಮ್ಮಾಯಿ ಆರೋಪ

Valmiki Corporation Scam: ವಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ. ಮಾರ್ಚ್ 31 ಕೈ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ, ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಿಕರಣ ನೀಡಬೇಕು

ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

Seniro Journalist Shashidhar Bhat Health Update: ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ

ತಮಿಳುನಾಡಿಗೆ 30 ಟಿಎಂಸಿ ನೀರು ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

30 TMC Water Released to Tamil Nadu“ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ