ದೇವೇಗೌಡರೇ ನಿಮ್ಮ ಪಾಳೆಗಾರಿಕೆ – ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ರಾಮನಗರ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚನ್ನಪಟ್ಟಣ ಉಪ ಚುನಾವಣೆ ಅಂಗವಾಗಿ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ…








