ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿ ಎ ಮತ್ತು ಇಂಡಿಯಾ ಒಕ್ಕಟವನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಒಕ್ಕೂಟ ಪರಿವಾರವಾದಿಗಳು ಮತ್ತು ಭ್ರಷ್ಟಾಚಾರಿಗಳ ಒಕ್ಕೂಟ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆರೋಪಿಸಿದ್ದಾರೆ.
ಈ ಆರೋಪವನ್ನು ಅವರು ಮಾಡಿದ್ದು ಬೆಂಗಳೂರಿನಲ್ಲಿ. ಬೆಳಿಗ್ಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ ಉಪಹಾರ ಸ್ವೀಕರಿಸಿದ ನಂತರ ಇನ್ನೊಂದು ಕಾರ್ಯಕ್ರಮದಲ್ಲಿ ಅವರು ಈ ಮಾತು ಹೇಳಿದ್ದು ಆಶ್ಚರ್ಯ ಉಂಟು ಮಾಡುವಂತಿತ್ತು. ಪರಿವಾರ ರಾಜಕಾರಣದ ಕುಡಿ ಕುಮಾರಣ್ಣನ ಜೊತೆ ಮಾತನಾಡಿದ ನಂತರ ಅವರು ಪರಿವಾರವಾದವನ್ನು ಟೀಕಿಸಿದ್ದು ಯಾಕೆ ಎಂಬುದು ತಿಳಿಯಲಿಲ್ಲ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಭಾಗಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು.
ಈ ಬಾರಿ 400 ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮೈತ್ರಿಕೂಟ ಪಡೆಯಬೇಕು. ಅದಕ್ಕಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರಾವಧಿಯಲ್ಲಿ 12 ಲಕ್ಷ ಕೋಟಿ ಅವ್ಯವಹಾರ ಮಾಡಿದೆ ಎಂದು ಅವರು ಆರೋಪಿಸಿದರಾದರೂ ಈ ಆರೋಪದ ಬಗ್ಗೆ ಯಾವುದೇ ವಿವರಗಳನ್ನು ನೀಡಲಿಲ್ಲ. ಹಾಗೆ ತಾವು ಅಧಿಕಾರಕ್ಕೆ ಬಂದು ಹತ್ತು ವರ್ಷಗಳ ಅವಧಿಯಲ್ಲಿ ಈಭ್ರಷ್ಟಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿತ್ತು ಎಂಬ ಬಗ್ಗೆಯೂ ಅವರು ಮೌನವಾಗಿದ್ದರು.
ತಮ್ಮ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟಾರ್ಗೆಟ್ ಮಾಡಿದ ಅವರುಎಂದಿಗೂ ರಜೆ ತೆಗೆದುಕೊಳ್ಳದ ಪ್ರಧಾನಿ ನರೇಂದ್ರ ಮೋದಿ ಮತ್ತು ಬೇಸಿಗೆ ಆರಂಭವಾದಂತೆ ವಿದೇಶ ಪ್ರವಾಸ ಮಾಡುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲಿಯ ಹೋಲಿಕೆ ಎಂದು ಪ್ರಶ್ನಿಸಿದರು.
ಕೇಂದ್ರ ಗೃಹ ಸಚಿವರು ಚುನಾವಣಾ ದೇಣಿಗೆಯ ಬಗ್ಗೆ ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ಪ್ರಸ್ತಾಪ ಮಾಡಲೇ ಇಲ್ಲ. ಹಾಗೆ ದೆಹೈ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬಗ್ಗೆ ವಿಶ್ವದ ಹಲವು ದೇಶಗಳು ಆತಂಖ ವ್ಯಕ್ತ ಪಡಿಸಿದ ವಿಚಾರವೂ ಅವರಿಗೆ ಮುಖ್ಯ ಅನ್ನಿಸಲಿಲ್ಲ.
ಕರ್ನಾಟಕದಲ್ಲಿ ಬಿಜೆಪಿ-ಜೆಡಿ(ಎಸ್) ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಂಪೂರ್ಣ ವಿಶ್ವಾಸದಿಂದ ಹೇಳಬಲ್ಲೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಖಾತೆ ತೆರೆಯಲು ಬಿಡುವುದಿಲ್ಲ ಎಂದರು.







