ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಮೂರು ದಿನ ಅವರದು ಎಡ ಬಿಡಿದ ಕಾರ್ಯಕ್ರಮಗಳು. ಗೆಲುವಿನ ಮಂತ್ರ.
ಇಂದು ಬೆಳಿಗ್ಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.
11ಕ್ಕೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ.
ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ.
ಏ.2ರ ಬೆ.10ಕ್ಕೆ ಶಂಕರಮಠಕ್ಕೆ ಸಿಎಂ ಭೇಟಿ.
11 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಚುನಾವಣಾ ಪ್ರಚಾರ.
ಸ.4ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಮುಖಂಡರ ಜೊತೆ ಸಿಎಂ ಸಭೆ.
ಏ.3ಕ್ಕೆ ಬೆ.9.30ಕ್ಕೆ ಸುತ್ತೂರು ಮಠಕ್ಕೆ ಸಿಎಂ ಭೇಟಿ.
ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿರುವ ಸಿಎಂ.
ಬೆ.10.35 ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ.
ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ ಭಾಗಿ.
ಮ.1 ಕ್ಕೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಭಾಗಿ




