ಮೀಸಲಾತಿ ಕುರಿತ ಹೇಳಿಕೆ ಸಾಬೀತು ಪಡಿಸಿ ಇಲ್ಲ, ದೇಶದ ಜನರ ಕ್ಷಮೆ ಕೇಳಿ: ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Siddaramaiah vs Narendra Modi ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿರುವುದು ಹಸಿ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಹೇಳಿಕೆ ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಮೀಸಲಾತಿಯನ್ನು ಕಡಿಮೆ ಮಾಡಿ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ ಮೋದಿ ವಿರುದ್ದ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವೀಟರ್​​) ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ. ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು.

ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಆಗ್ರಹಿಸಿದ್ದಾರೆ.

Author

error: