ಮೈಸೂರು : ನಾಳೆ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ನೀಡಿದ ಕೊಡುಗೆ ಏನು ? ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ. ಮೋದಿ ಅವರು ಕರ್ನಾಟಕಕ್ಕೆ ಬರಲಿ ನಮ್ಮ ಆಕ್ಷೇಪ ಇಲ್ಲ. ಆದರೆ ಅವರು ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಹೇಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ಅವರು, ಪ್ರಧಾನಿ ಅವರು ಮೈಸೂರಿಗೆ ಬರುತ್ತಿರುವುದಕ್ಕೆ ನನ್ನ ಅಭ್ಯಂತರ ಇಲ್ಲ. ಆದರೆ ನಿರುದ್ಯೋಗ, ನಿವಾರಣೆಗೆ ಏನು ಮಾಡಿದ್ದಾರೆ ? ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಆನ್ಯಾಯದ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ ? ಬರ ಪರಿಹಾರದ ಹಣವನ್ನು ನಮಗೆ ನೀಡಿಲ್ಲ ಯಾಕೆ ಎಂದು ಸಿದ್ದರಾಮಯ್ಯ ಕೇಳಿದರು.
ಅಂಬೇಡ್ಕರ್ ಅವರು ಈಗ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಂವಿಧಾನ ಬದಲಿಸಬೇಕು ಎಂದು ಹೇಳಿದವರೇ ಸಂಸದ ಅನಂತಕುಮಾರ್ ಹೆಗಡೆ. ಅವರು ಇಂಥ ಹೇಳಿಕೆ ನೀಡಿದಾಗಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು. ಯಾಕೆ ಕ್ರಮ ಕೈಗೊಂಡಿಲ್ಲ ಎಂದೂ ಪ್ರಶ್ನಿಸಿದರು.







