ಮಳವಳ್ಳಿಯ ಸಾಧನಾ ಸಮಾವೇಶದಲ್ಲಿ ಸಿಎಂ ಕೇಂದ್ರದ ವಿರುದ್ಧ ವಾಗ್ದಾಳಿ….

ತಿಂಗಳಿಂದ ರಾಜ್ಯ ಪ್ರವಾಸದಲ್ಲಿದ್ದ ಸಿಎಂ ಸಿದ್ಧರಾಮಯ್ಯನವರ ಪ್ರವಾಸ ಅಂತ್ಯಗೊಂಡಿದೆ. ಇಂದು ಮಂಡ್ಯ ಜಿಲ್ಲೆಯು ಮಳವಳ್ಳಿಯಲ್ಲಿ ಸಾಧನಾ ಸಮಾವೇಶ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಕೇಂದ್ರದಿಂದ ಆದಾಯ ತೆರಿಗೆ ಇಲಾಖೆ ದುರ್ಬಳಕೆ ಮಾಡಿಕೊಳ್ಳುತ್ತಿದೆ,. ರಾಜಕೀಯ ಎದುರಾಳಿಗಳ ವಿರುದ್ಧ ಐಟಿ ದಾಳಿಯ ಅಸ್ತ್ರ ಬಳಕೆ ಮಾಡುತ್ತಿದೆ,ಎಂದ್ರು.ಕರ್ನಾಟಕದ ವಿಧಾನಸಭಾ ಚುನಾವಣೆ ಹತ್ತಿರುವಾಗುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ, ಒಂದು ತಿಂಗಳಿಂದ ಸಿಎಂ ಸಿದ್ದರಾಮಯ್ಯ ರಾಜ್ಯದ ಜಿಲ್ಲಾ ಪ್ರವಾಸ ಇಂದು ಯಶಸ್ವೀಯಾಗಿ ಮುಕ್ತಾಯ ಕಂಡಿದೆ. ಡಿಸೆಂಬರ್ 13 ರಿಂದ ಬೀದರ್ ಜಿಲ್ಲೆಯಿಂದ ಆರಂಭವಾದ ಪ್ರವಾಸ ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮುಕ್ತಾಯ ಕಂಡಿತು.


ಸಿಎಂ ಸಿದ್ದರಾಮಯ್ಯ ಒಟ್ಟು 28 ದಿನಗಳ ಕಾಲ 28 ಜಿಲ್ಲೆಗಳ ಸುಮಾರು 80 ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳಲ್ಲಿ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅನೇಕ ಸರ್ಕಾರದ ಸಾಧನಾ ಸಮಾವೇಶಗಳನ್ನು ನಡೆಸಿದರು. ಇಂದು ಸಿದ್ದರಾಮಯ್ಯ ತಮ್ಮ ಕೊನೆಯ ಪ್ರವಾಸ ಮಂಡ್ಯ ಜಿಲ್ಲೆಯಲ್ಲಿ ನಡೆಸಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಜಿಲ್ಲಾಡಳಿತದಿಂದ ಸರಕಾರದ ಸಾಧನಾ ಸಮಾವೇಶಗಳನ್ನು ಆಯೋಜಿಸಲಾಗಿತ್ತು…ಮಳವಳ್ಳಿ ಪಟ್ಟಣದಲ್ಲಿ ದೀಪ ಬೆಳಗಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದ್ರು, ಬಳಿಕ ಸುಮಾರು 160 ಕೋಟಿ ಮೊತ್ತದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದರು.ಇನ್ನು ವೇದಿಕೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಹಾಗೂ ಮಳವಳ್ಳಿ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು..

ಮಳವಳ್ಳಿ ಸಮಾವೇಶದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಸರಕಾರದಿಂದ ಬಂದ ಅನುದಾನ, ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತು ತಿಳಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿದ ಜನಪರ, ನೀರಾವರಿ, ಕೃಷಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿದರು. ಮುಂದಿನ ಬಾರಿಯೂ ಶಾಸಕ ಪಿ.ಎಂ.ನರೇಂದ್ರ ಸ್ವಾಮಿಯನ್ನು 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡ್ರು. ಇದೇ ವೇಳೆ ಮಾತನಾಡಿ ಕೇಂದ್ರದಿಂದ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ರಾಜಕೀಯ ಎದುರಾಳಿಗಳ ವಿರುದ್ಧ ಐಟಿ ದಾಳಿಯ ಅಸ್ತ್ರ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು.ಒಟ್ಟಿನಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ತಮ್ಮ 28 ಜಿಲ್ಲೆಗಳ ಸುದೀರ್ಘ ಪ್ರವಾಸವನ್ನು ಯಶಸ್ವಿಯಾಗಿ ಅಂತ್ಯಗೊಳಿಸಿದರು. ಈ ಜಿಲ್ಲಾ ಪ್ರವಾಸ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ನವೋಲ್ಲಾಸ ಮೂಡಿಸಿದ್ದು ಮುಂಬರುವ ವಿಧಾನಸಭೆ ಚುನಾವಣೆಯನ್ನು ಎದುರಿಸಲು ದೊಡ್ಡ ಬಲವನ್ನೇ ತಂದುಕೊಟ್ಟಿದೆ.

ಮಸೂದ್ ದೊಡ್ಡೇಬಾಗಿಲು, ಸುದ್ದಿ ಟಿವಿ…

0

Leave a Reply

Your email address will not be published. Required fields are marked *