ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Pralhad Joshi: ಕಾಂಗ್ರೆಸ್ ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್ ನವರು ಹೆಚ್ ಡಿ ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೂ ವಿರೋಧಿ ಪಕ್ಷ. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು‌ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್ ನವರು ಹೆಚ್ ಡಿ ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್ ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ರಿ, ಇವಾಗ ನಿಮಗೆ ಜ್ಞಾನೋದಯ ಆಗಿದೆಯಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುರುಗೇಶ್ ನಿರಾಣಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಿರಾಣಿ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರಿಗೆ ಮನವಿ ಮಾಡುವಂತಹ ತಪ್ಪೇನು ಆಗಿಲ್ಲ. ಸಿಎಂ ಸಿದ್ದರಾಮಯ್ಯ ಅವರು ವಕೀಲರು, 50 ವರ್ಷ ರಾಜಕೀಯ ಅನುಭವವಿದೆ. ಹಾಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವ ಕನಸು ಕಂಡವರು. ಅವರಿಗೆ 40 ವರ್ಷದ ರಾಜಕೀಯದ ಅನುಭವವಿದೆ. ಏನು ವಿಷಯ ಅಂತಾ ಇಲ್ಲಿವರೆಗೂ ಒಬ್ಬರಾದರೂ ಹೇಳಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.

 ಆದರೆ ಯಾವ ವಿಷಯಕ್ಕೆ ಪ್ರಾಸಿಕ್ಯೂಷಸ್​ಗೆ ಅನುಮತಿ ‌ಕೊಡಬೇಕು. ಸರ್ಕಾರಕ್ಕೆ ಏನು ನಷ್ಟ ಆಗಿದೆ ಅಂತಾ ಸ್ಪಷ್ಟೀಕರಣ ಕೊಡಬೇಕಲ್ವಾ? ಏನೂ ಇಲ್ಲದೆ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Author

error: