Karnataka MLC Polls : ವಿಧಾನ ಪರಿಷತ್​ ಚುನಾವಣೆ : ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

MLC Polls Candidates; ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಸಚಿವ ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್​ ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಒಟ್ಟು ಏಳು ಮಂದಿಗೆ ಟಿಕೆಟ್‌ ನೀಡಲಾಗಿದೆ.

ಡಾ.ಯತೀಂದ್ರ ಸಿದ್ಧರಾಮಯ್ಯ, ಸಚಿವ ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ನೀಡಲಾಗಿದೆ.

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಇನ್ನು ಜೂನ್ 13ರಂದು ವಿಧಾನಪರಿಷತ್ನ 11 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಸಮುದಾಯಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇನ್ನು ಏಳು ಸ್ಥಾನಗಳಿಗೆ ನೂರಾರು ಮಂದಿ ಆಕಾಂಕ್ಷಿಗಳು ಇದ್ದರು. ಕಾಂಗ್ರೆಸ್ ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾದ ಹಿನ್ನೆಲೆಯಲ್ಲಿ ಶಾರ್ಟ್ ಲಿಸ್ಟ್ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ.

ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾಜಿ ಸಚಿವ ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

Author

error: