ಹುಬ್ಬಳ್ಳಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿ ಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ಮಾಡುತ್ತೇವೆ ಎನ್ನುತ್ತಾರೆ. ಲೋಕಸಭೆಯ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹಾಕಿ ಸ್ಪರ್ಧಿಸುತ್ತಿಲ್ಲ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಪ್ರಶ್ನಿಸಿದರು.

ಡಿಎಂಕೆದು ಪ್ರಣಾಳಿಕೆ ಬೇರೆ, ಟಿಎಂಸಿದು ಬೇರೆ, ಇನ್ನು ಆಮ್‌ ಆದ್ಮಿ ಪಕ್ಷದ್ದು ಬೇರೆ. ಕಾಂಗ್ರೆಸ್‌ದು ಮತ್ತೊಂದು. ಜನರು ಯಾವುದನ್ನು ನಂಬಬೇಕು ಹೇಳಿ. ಜನರಿಗೆ ಅಪ್ಪಟ ಸುಳ್ಳು ಹೇಳಿ ಇಂತಹ ಆ‍ಶ್ವಾಸನೆ ಕೊಡುತ್ತಿದ್ದಾರೆ. ಒಂದು ಲಕ್ಷ ಕೊಡುತ್ತೇವೆ, ಎರಡು ಲಕ್ಷ ಕೊಡುತ್ತೇವೆ ಎಂದು ಜನರಿಗೆ ಕಾಂಗ್ರೆಸ್‌, ಸುಳ್ಳು ಹೇಳಿ ಮೋಸ ಮಾಡುವುದನ್ನು ಬಿಡಬೇಕು. ಕೆಲವು ಸ್ಥಾನಗಳಿಗಷ್ಟೇ ಕಾಂಗ್ರೆಸ್‌ ಸ್ಪರ್ಧೆ ಮಾಡುತ್ತಿದೆ. ಮೊದಲು 543 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿ, ಆಮೇಲೆ ಇಂತಹ ಆಶ್ವಾಸನೆ ಕೊಡಿ ಎಂದು ಬೊಮ್ಮಾಯಿ ಕಾಂಗ್ರೆಸಿಗೆ ಸವಾಲು ಹಾಕಿದರು.

ಬರ ಪರಿಸ್ಥಿತಿಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ:

ರಾಜ್ಯದ ಬರ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದ್ದು, ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ ಎಂದರು.

ರಾಜಕೀಯ ಪ್ರೇರಿತ ದೃಷ್ಟಿಯಿಂದ ಸಿದ್ದರಾಮಯ್ಯ ಬರಪರಿಹಾರಕ್ಕಾಗಿ ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. 15 ನೇ ಹಣಕಾಸು ಆಯೋಗದಲ್ಲಿ ಅನುದಾನ ಕಡಿಮೆ ಆಗಲು ಸಿದ್ದರಾಮಯ್ಯನವರು ಕಾರಣ. ಕೇಂದ್ರಕ್ಕೆ ಅವರು ರಾಜ್ಯದ ನೈಜ್ಯಸ್ಥಿತಿಯನ್ನ ಆಗಿನ ಸರ್ಕಾರ ಹೇಳಿಕೊಳ್ಳಲಿಲ್ಲಾ ಅದಕ್ಕೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಯುಪಿಎ ಸರ್ಕಾರ ಇದ್ದಾಗ 8-10 ತಿಂಗಳ ನಂತರ ಪರಿಹಾರ ನೀಡಿದ ಉದಾಹರಣೆಯಿದೆ. ಇವರಿಗೆ ರೈತರ ಬಗ್ಗೆ ಕಳಕಳಿ ಇಲ್ಲಾ. ರೈತ ವಿರೋಧಿ ಸರ್ಕಾರ ಇದಾಗಿದೆ ಎಂದರು.

Author

Leave a Reply

Your email address will not be published. Required fields are marked *