ನವದೆಹಲಿ :”ಎನ್ ಡಿಎ ಮೈತ್ರಿಕೂಟ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಹೊಂದಿದ್ದು, ಅವರ ಕಾರ್ಯ ಚಟುವಟಿಕೆಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ನಿಂತು ಜನರ ಹಿತಕ್ಕಾಗಿ ಹೋರಾಡಲು ತೀರ್ಮಾನಿಸಿದೆ” ಎಂದರು.
ಈ ನಡುವೆ ಡಿಸಿಎಂ ಅವರು ಇಂದು ಬೆಳಿಗ್ಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಕರ್ನಾಟಕದ ಪಕ್ಷದ ಚಟುವಟಿಕೆಗಳ ವಿವರ ನೀಡಿದರು.







