ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್​​​ ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ. ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿವೆ.

ಉದ್ಯಮಿಯೊಬ್ಬರ ಒಡೆತನದ ಫಾರ್ಮ್ ​​​ಹೌಸ್​​ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ತನ್ನ ಬರ್ತಡೇ ಪಾರ್ಟಿ ಆಯೋಜಿಸಿದ್ದ. ಅವಧಿ ಮುಗಿದ ಬಳಿಕವೂ ಪಾರ್ಟಿ ಮುಂದುವರೆಯುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ಸುಮಾರು 17 ಗ್ರಾಂನಷ್ಟು ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು ಎಂಬುದು ಪೊಲೀಸ್​ ಮೂಲಗಳಿಂದ ತಿಳಿದುಬಂದಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದವರ ಪೈಕಿ ತೆಲುಗು ಚಿತ್ರರಂಗದ ಪೋಷಕ ನಟಿಯೊಬ್ಬರ ಸಹಿತ, ಕಿರುತೆರೆ ನಟ-ನಟಿಯರು, ಮಾಡೆಲ್​​ಗಳು ಹಾಗೂ ಟೆಕ್ಕಿಗಳನ್ನ ವಶಕ್ಕೆ ಪಡೆಯಲಾಗಿದೆ. ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *