ಕ್ರಿಮಿನಲ್ ಪಿತೂರಿ ಆರೋಪ ಕೈಬಿಡದಿರಲು ಕೋರ್ಟ್ ನಿರ್ಧಾರ

ಲಖ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಜಾಮೀನು ಮತ್ತು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಆರೋಪಿಗಳು ಕೋರ್ಟ್​​ಗೆ ಮನವಿ ಮಾಡಿಕೊಂಡರು. ಆದರೆ, ತಮ್ಮ ವಿರುದ್ಧ ಎದುರಾಗಿರುವ ಕ್ರಿಮಿನಲ್ ಪಿತೂರಿ ಆರೋಪವನ್ನು ಕೈಬಿಡುವಂತೆ ಮಾಡಿದ್ದ ಮನವಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ, ಉಮಾ ಭಾರತಿ, ವಿನಯ್ ಕಟಿಯಾರ್ ಮತ್ತು ಸಂಘ ಪರಿವಾರದ ಮುಖಂಡರಿಗೆ ಭಾರೀ ಹಿನ್ನಡೆಯಾಗಿದೆ.

0

Leave a Reply

Your email address will not be published. Required fields are marked *