ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Arvind Kejriwal; ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಬಂಧಿಸಲಾಗಿದೆ.
