ಶಿವಮೊಗ್ಗ: ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರರೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರ ತಾಳಗುಪ್ಪ ನಿವಾಸಿ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. 33 ವರ್ಷದ ನಾಗರಾಜ್ ಅವರು ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.
ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಾಗರಾಜ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
