8ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಇಂದು 8ನೇ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಗುಂಡ್ಲುಪೇಟೆ ಪಟ್ಟಣದ ಗುರು ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ವತಿಯಿಂದ ಶ್ರೀರಾಜಶೇಖರ ಕೋಟಿ ವೇದಿಕೆಯಲ್ಲಿ ಆಯೋಜಿಸಿದ್ದ 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿ ಸಿ.ನಾಗಣ್ಣ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವೆ ಗೀತಾಮಹದೇವಪ್ರಸಾದ್, ಸಂಸದ ಆರ್.ಧ್ರುವನಾರಾಯಣ್, ಸಮ್ಮೇಳನಾದ್ಯಕ್ಷ ಜಿ. ಜಿ.ಮಂಜುನಾಥ್, ಸಾಹಿತಿ ಮಲೆಯೂರು ಗುರುಸ್ವಾಮಿ, ರೈತ ಮುಖಂಡ ಮಹೇಶ್ ಪ್ರಭು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ವಿನಯ್, ಮಾಜಿ ಅಧ್ಯಕ್ಷ ಸೋಮಶೇಖರ್ ಬಿಸಲವಾಡಿ ಸಾಥ್ ನೀಡಿದರು.

0

Leave a Reply

Your email address will not be published. Required fields are marked *