ನವದೆಹಲಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಏಪ್ರಿಲ್ 29 ರೊಳಗೆ ಈ ನೋಟಿಸ್ಗೆ ಉತ್ತರ ನೀಡುವಂತೆಯೂ ಆಯೋಗ ಸೂಚಿಸಿದೆ.
ಜನತಾ ಪ್ರಾತಿನಿಧ್ಯ ಕಾನೂನಿ 77 ನೆಯ ವಿಧಿ ಪ್ರಕಾರ ಇಂಥ ಪ್ರಕರಣಗಳಲ್ಲಿ ಪಕ್ಷಗಳ ಅಧ್ಯಕ್ಷರು ಇದಕ್ಕೆ ಹೊಣೆಗಾರರಾಗಿರುತ್ತಾರೆ. ಯಾರು ಕಾನೂನು ಉಲ್ಲಂಘಿಸಿದ್ದಾರೋ ಅವರನ್ನು ತಾರಾ ಪ್ರಚಾರಕ ಪಟ್ಟಿಯಿಂದ ಹೊರಕ್ಕೆ ಹಾಕಬಹುದು.
ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಅವರು ನೀತಿ ಸಂಹಿತೆ ಉಲ್ಲಂಘಿಸಿರುವ ನೋಟಿಸಿನ ಪ್ರತಿಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಚುನಾವಣಾ ಆಯೋಗ ಕಳುಹಿಸಿಕೊಟ್ಟಿದೆ.
