ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಉದುಸೆ ಗ್ರಾಮದಲ್ಲಿ ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದಿದೆ.ಹುಲಿ ಸೆರೆಹಿಡಿಯಲು ಆನೆ ಬಳಸಿಕೊಳ್ಳಲಾಗಿದೆ.. ಕಳೆದ ಒಂದು ತಿಂಗಳಿನಿಂದ ಉದುಸೆ ಗ್ರಾಮಗಳ ಸುತ್ತಲಿನಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಗೊಂಡಿದ್ದರು. ಹಾಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಹುಲಿ ಸೆರೆಗೆ ಮೂರು ಆನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.