ಬೆಂಗಳೂರು : ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6 ರಿಂದ 16 ವರ್ಷ ದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನ ಸೌಧದಲ್ಲಿ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್ಆರ್ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8163 ಕೋಟಿ ಕಡ್ಡಾಯವಾಗಿ ಸಿಎಸ್ಆರ್ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1190 ಕೋಟಿ ಕಳೆದ ವರ್ಷ ಸಿಎಸ್ಆರ್ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್ಆರ್ ಅಡಿ ಬಳಸುತ್ತಿವೆ ಎಂದರು.

ರಾಮನಗರ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್ಆರ್ ಅಡಿ ಒದಗಿಸಿದ್ದಾರೆ. ನಾವು 3 ಎಕ್ರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ‍ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

Author

Leave a Reply

Your email address will not be published. Required fields are marked *